ವಿಶ್ವದ ಅತಿ ದೊಡ್ಡ ಸೌರ ಶಕ್ತಿ ಯೋಜನೆ ಹೆಗ್ಗಳಿಕೆಗೆ ಪಾತ್ರವಾಗಿರುವ "PM ಸೂರ್ಯಘರ್ ", 10 ಲಕ್ಷ ಸೌರ ಮೇಲ್ಛಾವಣಿ ಸ್ಥಾಪನೆಯ ಹೊಸ ಮೈಲಿಗಲ್ಲು ಸಾಧಿಸಿದೆ. ಜತೆಗೆ ದೇಶದ ನಾಗರಿಕರಿಗೆ ವಿದ್ಯುತ್ ವೆಚ್ಚ ಉಳಿತಾಯ ಹಾಗೂ ದೀರ್ಘ ಕಾಲದ ಆದಾಯಕ್ಕೆ ದಾರಿ ಮಾಡಿಕೊಡುತ್ತಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಖಾತೆ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.
ಸೂರ್ಯ ಘರ್ ಫಲಾನುಭವಿ 3 ಕಿಲೋ ವ್ಯಾಟ್ ಸಾಮರ್ಥ್ಯದ ಸೌರ ಮೇಲ್ಛಾವಣಿ ಘಟಕವನ್ನು 15 ಸಾವಿರ ಬಂಡವಾಳ ಹೂಡಿಕೆಯೊಂದಿಗೆ ಸ್ಥಾಪಿಸಬಹುದಾಗಿದೆ. ಅಲ್ಲದೇ, ಇದರಿಂದ 25 ವರ್ಷಗಳಲ್ಲಿ 15 ಲಕ್ಷ ರೂಪಾಯಿವರೆಗೂ ಆದಾಯ ನಿರೀಕ್ಷಿಸಬಹುದಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು 2024ರ ಫೆಬ್ರವರಿ 13ರಂದು ಪ್ರಾರಂಭಿಸಿದ ಈ ಮಹತ್ವಾಕಾಂಕ್ಷೆಯ ಯೋಜನೆ 1 ಕೋಟಿ ಮನೆಗಳಿಗೆ ಸೌರ ಮೇಲ್ಛಾವಣಿ ಅಳವಡಿಕೆ ಮೂಲಕ ಉಚಿತ ವಿದ್ಯುತ್ ಒದಗಿಸುವ ಗುರಿ ಹೊಂದಿದೆ. 12 ಸಾರ್ವಜನಿಕ ವಲಯದ ಬ್ಯಾಂಕ್ ಗಳ ಮೂಲಕ 2 ಲಕ್ಷ ರೂಪಾಯಿವರೆಗಿನ ಸಾಲಗಳಿಗೆ ಶೇಕಡ.6.75 ಸಬ್ಸಿಡಿ ಬಡ್ಡಿ ದರದಲ್ಲಿ ಸಾಲ ಒದಗಿಸಲಾಗುತ್ತಿದೆ. ಸಾಲಕ್ಕೆ ಅರ್ಜಿ ಸಲ್ಲಿಕೆ ಸಂಪೂರ್ಣ ಸ್ವಯಂ ಚಾಲಿತ ಮತ್ತು ಆನ್‌ಲೈನ್ ಪ್ರಕ್ರಿಯೆಯಾಗಿದ್ದು, 2027ರ ಮಾರ್ಚ್ ವೇಳೆಗೆ ಹೆಚ್ಚುವರಿಯಾಗಿ 27 ಗಿಗಾವ್ಯಾಟ್ ಗುರಿ ಸಾಧನೆಯತ್ತ ಮುನ್ನಡೆಯುತ್ತಿದೆ ಎಂದು ಹೇಳಿದ್ದಾರೆ.
#LiveDDChandanaNews #DDChandanaNews #DDChandana #DDKannada